ಬೆಳಗಾವಿ: ಬಹಳ ದಿನಗಳಿಂದ ನೀರಿಕ್ಷೆ ಮಾಡುತ್ತಿದ್ದ ಬೆಳಗಾವಿ ಚಳಿಗಾಲದ ಅಧಿವೇಶನ ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯಲಿದೆ . ಅಧಿವೇಶನಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನು ಡಿಸೆಂಬರ್ 9 ರಿಂದ 20ವರೆಗೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕರ್ ಯುಟಿ ಖಾದರ್, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಈಗಾಗಲೇ ಮಾಹಿತಿ ನೀಡಿದ್ದಾರೆ.