
ಬೆಳಗಾವಿ: ಸುವರ್ಣಸೌಧ ಬೆಳಗಾವಿಯಲ್ಲಿ ನಡೆಯುತ್ತಿರುವ 2025 ನೇ ಸಾಲಿನ ಚಳಿಗಾಲ ಅಧಿವೇಶನವನ್ನು ವೀಕ್ಷಿಸುವ ಉದ್ದೇಶದಿಂದ ಶ್ರೀ ಸಿದ್ದರಾಮೇಶ್ವರ ಪಿಯು ಕಾಲೇಜು, ಬೆಳಗಾವಿಯ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಅಧಿವೇಶನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಭಾಷಣವನ್ನು ಆಲಿಸಿ, ರಾಜಕೀಯ ಮತ್ತು ಶಾಸಕಾಂಗದ ಕಾರ್ಯವೈಖರಿಯನ್ನು ಕುತೂಹಲದಿಂದ ಅವಲೋಕಿಸಿ ಅಗತ್ಯ ಜ್ಞಾನವನ್ನು ಸಂಪಾದಿಸಿದರು.

ಕಾರ್ಯಕ್ರಮಕ್ಕೆ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕ ಪ್ರಮೇಶ ದೊಡಮನಿ, ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ವೇತಾ ಜಿ ಮತ್ತು ಶಕುಂತಲಾ ಪಾಟೀಲ ಉಪಸ್ಥಿತರಿದ್ದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143





















