Live Stream

[ytplayer id=’22727′]

| Latest Version 8.0.1 |

Local News

ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಸ. ಹಿ. ಪ್ರಾ. ಶಾಲೆ ಕರಿಮುದ್ದನಹಳ್ಳಿಯ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಸ. ಹಿ. ಪ್ರಾ. ಶಾಲೆ ಕರಿಮುದ್ದನಹಳ್ಳಿಯ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು: ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಿಮುದ್ದನಹಳ್ಳಿ ಹಾಗೂ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು (World Environment Day) ಆಚರಿಸಲಾಯಿತು.

ಮೊದಲಿಗೆ ಗಿಡಕ್ಕೆ ನೀರನು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಇದೆ ಸಂಧರ್ಭದಲ್ಲಿ ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ರಾಜ್ಯ ಸಂಯೋಜಕರಾದ ಗೋವಿತ್ ಕಿರಣ್ ಮಾತನಾಡಿ ಏಕಲ್ ಗ್ರಾಮೋಥಾನ್ ಫೌಂಡೇಶನ್ ಗದ್ದಿಗೆ ಸಮಗ್ರ ಗ್ರಾಮೀಣಾಭಿವೃದ್ಧಿಗಾಗಿ ಅನೇಕ ಯೋಜನೆಯನ್ನು ರೂಪಿಸಿದೆ ಗ್ರಾಮಿಣ ಭಾಗದಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಇದರೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಾಮುಖ್ಯತೆಯ ಬಗ್ಗೆ ಹಾಗೂ ಉದ್ದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ಗ್ರಾಮಸ್ಥರಿಗೆ ಯುವಕರಿಗೆ ತಿಳಿಸಲಾಯಿತು,ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವು ಮಾತನಾಡಿ ಈ ರೀತಿಯ ಸಂಸ್ಥೆಯೊಂದಿಗೆ ಕಾರ್ಯಕ್ರಮವನ್ನು ಮಾಡಲು ‌ತುಂಬಾ ಸಂತೋಷವಾಗುತ್ತಿದೆ, ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಸೇವೆಯನ್ನು ಸಾಧಿಸುತ್ತಿದೆ ಹಾಗೂ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ನಂತರ ಶಾಲೆಯ ಆವರಣದಲ್ಲಿ ಗಿಡವನ್ನು ನೆಟ್ಟು ಊರಿನ ಪ್ರಮುಖ ಬೀದಿಗಳಲ್ಲಿ ಪರಿಸರ ಬಗೆ ಘೋಷ ವಾಕ್ಯವನ್ನು ಕೂಗುತ್ತಾ ಜಾಥಾವನ್ನು ಮಾಡಿ, ಗ್ರಾಮದ ಪ್ರಮುಖ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛ ಭಾರತ ಕಲ್ಪನೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲಾಯಿತು.

ಈ ಸಂದರ್ಭದಲ್ಲಿ ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ರಾಜ್ಯ ಸಂಯೋಜಕರಾದ ಗೋವಿತ್ ಕಿರಣ್, ಶಾಲೆಯ ಮುಖ್ಯೋಪಾಧ್ಯರಾದ ಮಹದೇವು , ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಶಾಲಾ ಎಂ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಶಿಕ್ಷಕರು ಗ್ರಾಮಸ್ಥರು ಗ್ರಾಮದ ಹಿರಿಯರು , ಯುವಕರು. ಏಕಲ್ ಗ್ರಾಮೋಥಾನ್ ಫೌಂಡೇಶನ್ ಸಂಸ್ಥೆಯ ಕಂಪ್ಯೂಟರ್ ಹಾಗೂ ಟೈಲರಿಂಗ್ ಶಿಕ್ಷಕರು ಉಪಸ್ಥಿತರಿದ್ದರು.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";