ಮೈಸೂರು: ನಗರದ ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ನವರಾತ್ರಿಯ 9ನೇ ದಿನ ಇಂದು (ಅ.11) ಆಯುಧ ಪೂಜೆ. ಆಯುಧ ಪೂಜೆ ದಿನದಂದೇ ಯದುವಂಶಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ.
ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಸಹ ಆರೋಗ್ಯದಿಂದಿದ್ದಾರೆ.