ಹುಕ್ಕೇರಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಸಮೀಪವಿರುವ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಗೊಳ್ಳಿರುವ ಘಟನೆ ವರದಿಯಾಗಿದೆ.
ಬ್ಯಾರೇಜ್ ಮೂಲಕ ಸಾಗುವ ರಸ್ತೆ ಜಲಾವೃತಗೊಂಡಿದ್ದು, ಗ್ರಾಮೀಣ ಭಾಗದ ಜನರ ಸಂಚಾರಕ್ಕೆ ಭಾರೀ ತೊಂದರೆಯಾಗಿದೆ. ಸ್ಥಳೀಯರಿಗೆ ಹತ್ತಿರದ ಪಟ್ಟಣಗಳಿಗೆ ಹೋಗುವ ಸಂಪರ್ಕ ಕಡಿತಗೊಂಡಿರುವುದರಿಂದ ನಿತ್ಯದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ.
ಪ್ರವಾಹದ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಕೂಡಲೇ ಪುನಃ ಸಂಪರ್ಕ ಪುನಃಸ್ಥಾಪನೆಗಾಗಿ ನಿರ್ವಹಣಾ ಇಲಾಖೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
ವರದಿ: ಎ.ವೈ. ಸೋನ್ಯಾಗೋಳ
ಸುದ್ದಿ ಹಾಗೂ ಜಾಹಿರಾತುಗಳಿಗಾಗಿ ಸಂಪರ್ಕಿಸಿ:
+91 95905 51177